ಬಂಟ್ವಾಳ, ಜೂನ್ 27, 2024 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಹೊಸ್ಮಾರಿನಲ್ಲಿ ಮನೆಯ ಅಂಗಳ ಮುಂಭಾಗದ ತಡೆಗೋಡೆಯೊಂದು ಕುಸಿದು ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರ್ಧ ಭಾಗದ ತಡೆಗೋಡೆ ಕುಸಿದಿದ್ದು, ಉಳಿದ ಅರ್ಧ ಭಾಗದ ತಡೆಗೋಡೆ ಕುಸಿದು ಬೀಳುವ ಹಂತದಲ್ಲಿದೆ. ಘಟನೆಯಿಂದ ಮನೆಯ ಅಂಗಳ ಬಹುತೇಕ ಕುಸಿದಿದ್ದು, ಮನೆ ಅಪಾಯಕ್ಕೆ ಸಿಲುಕಿದೆ.
ಅದೇ ರೀತಿ ಸಮೀಪದ ದೈವಗುಡ್ಡೆ ಎಂಬಲ್ಲಿ ಅವರಣಗೋಡೆ ಕುಸಿದು ಎರಡು ಮನೆಗಳಿಗೆ ಹಾನಿಯಾಗುವ ಸಂಭವವಿದೆ. ಅಲ್ಲಿಗೂ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪ್ರಾಥಮಿಕ ಹಂತದಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು, ಮತ್ತು ಸಮಸ್ಯೆಯಿಂದ ಸಿಲುಕಿಕೊಂಡ ಮನೆಗಳಿಗೆ ತಾತ್ಕಾಲಿಕವಾಗಿ ಪರಿಹಾರ ಕಾರ್ಯಕೈಗೊಂಡು ಸರಕಾರದಿಂದ ಸಿಗುವ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಪ್ರಮುಖರಾದ ದೇವದಾಸ್ ಶೆಟ್ಟಿ, ರಾಮ್ ದಾಸ್ ಬಂಟ್ವಾಳ, ಗಂಗಾಧರ ಪೂಜಾರಿ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್ ಮೊದಲಾದವರು ಜೊತೆಗಿದ್ದರು.
0 comments:
Post a Comment