ಬಂಟ್ವಾಳ, ಜೂನ್ 16, 2024 (ಕರಾವಳಿ ಟೈಮ್ಸ್) : ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಇಲ್ಲಿನ ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ (ಜೂನ್ 15) 2024-25ನೇ ಸಾಲಿನ ವಿದ್ಯಾರ್ಥಿ ಸಂಸತ್ ರಚನೆ ಪ್ರಕ್ರಿಯೆ ನಡೆಯಿತು.
ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶಿಕ್ಷಕಿ ಚೈತ್ರ ಶೆಟ್ಟಿ ಮತ್ತು ಸಂಘದ ಸದಸ್ಯರ ನೇತೃತ್ವದಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ ಹಾಗೂ ಚುನಾವಣಾ ಪ್ರಚಾರದೊಂದಿಗೆ ಮತದಾನ ಪ್ರಕ್ರಿಯೆ ನಡೆಸಲಾಯಿತು.
ಆಧುನಿಕ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳು ಮತ ಚಲಾವಣೆ ನಡೆಸಿದರು. ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ನಾಯಕರಾಗಿ 10ನೇ ತರಗತಿ ವಿದ್ಯಾರ್ಥಿ ಅರ್ಪಣ್ ರೈ, ಉಪನಾಯಕರಾಗಿ 9ನೇ ತರಗತಿ ವಿದ್ಯಾರ್ಥಿ ರೋಹನ್ ಎಚ್, ಯೋಜನಾಧಿಕಾರಿಯಾಗಿ 10ನೇ ತರಗತಿ ವಿದ್ಯಾರ್ಥಿ ಯಕ್ಷ ಆರ್ ಶೆಟ್ಟಿ ಅವರು ಆಯ್ಕೆಯಾದರು.
ಪ್ರೌಢಶಾಲಾ ಮುಖ್ಯೋಪಾಧ್ಯಯ ಹರಿಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯ ಸತೀಶ್ ಬಂಗೇರ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಹೇಮಲತಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
0 comments:
Post a Comment