ಬಂಟ್ವಾಳ, ಜೂನ್ 28, 2024 (ಕರಾವಳಿ ಟೈಮ್ಸ್) : ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಸಹಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸುದರ್ಶನ್ ಬಿ ಹೇಳಿದರು.
ಬಂಟ್ವಾಳ-ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ವಿದ್ಯಾರ್ಥಿ ಸಂಘÀ, ವಿಜ್ಞಾನ ಸಂಘ ಮತ್ತು ಲಲಿತ ಕಲಾ ಸಂಘಗಳ ವಾರ್ಷಿಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಆದರ್ಶವಿಲ್ಲದೆ ಬದುಕಿದರೆ ಬದುಕಿಗೆ ಅವಮಾನ, ಸಾಧನೆ ಇಲ್ಲದೆ ಬದುಕಿದರೆ ಸಾವಿಗೆ ಅವಮಾನ. ಸಾಧನೆಯೇ ಜೀವನದ ಗುರಿಯಾಗಬೇಕೆಂದು ಎಂದರು.
ಶಾಲೆಯ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಹರಿಪ್ರಸಾದ್ ಮಾತನಾಡಿ ನಾಯಕತ್ವ ಗುಣ ವಿದ್ಯಾರ್ಥಿ ಜೀವನದಿಂದಲೇ ಮೈಗೂಡಿಸಿಕೊಳ್ಳಬೇಕು ಎಂದರು.
ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಸತೀಶ್ ಬಂಗೇರ, ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಹೇಮಲತಾ, ಶಾಲಾ ನಾಯಕ ಅರ್ಪಣ್ ರೈ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ಸೃಷ್ಟಿ ಪೂಜಾರಿ ಸ್ವಾಗತಿಸಿ, ಶಿರೋದಿತ್ ಬಿ ಶೆಟ್ಟಿ ವಂದಿಸಿದರು. ವೀಕ್ಷಿತಾ ಎನ್ ಮತ್ತು ಎಲ್ವೀನಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment