ಬಂಟ್ವಾಳ, ಜೂನ್ 24, 2024 (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಜನಸ್ಪಂದನಾ ಸಭೆಯು ಜೂನ್ 26 ರಂದು ಬುಧವಾರ ಅಪರಾಹ್ನ 3 ಗಂಟೆಗೆ ಬಿ ಸಿ ರೋಡಿನ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಸಭೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದು ಎಂದು ಬಂಟ್ವಾಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
0 comments:
Post a Comment