ಬಂಟ್ವಾಳ, ಜೂನ್ 14, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ಬಿ ಸಿ ರೋಡಿನಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ಬಿ ಮೂಡ ಗ್ರಾಮದ ನಿವಾಸಿ ಮಾಧವ ಪೂಜಾರಿ (41) ಎಂದು ಹೆಸರಿಸಲಾಗಿದೆ. ಇವರು ಬುಧವಾರ ರಾತ್ರಿ ತನ್ನ ಸ್ಕೂಟರಿನಲ್ಲಿ ತೆರಳುತ್ತಿದ್ದ ವೇಳೆ ಬಿ ಸಿ ರೋಡನಲ್ಲಿ ರೋಶನ್ ನವೀನ್ ಮಾಯಸ್ ಎಂಬವರು ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಮಾಧವ ಅವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ಹಾಗೂ ಅಟೋ ಚಾಲಕ ಸೇರಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment