ಬಂಟ್ವಾಳ, ಜೂನ್ 18, 2024 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಪರಿಚಿತ ವ್ಯಕ್ತಿಗಳು ಸತ್ತ ಕೋಳಿ, ಆಡು, ಕುರಿ ಇತ್ಯಾದಿ ಪ್ರಾಣಿಗಳ ಕೊಳೆತ ತ್ಯಾಜ್ಯಗಳನ್ನು ಬಿಸಾಡಿರುವ ಬಗ್ಗೆ ಸ್ಥಳೀಯ ನಿವಾಸಿ ಚಂದ್ರಶೇಖರ ಎಂಬವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಸ್ತೆ ಬದಿ ತ್ಯಾಜ್ಯ ಎಸೆದಿರುವುದರಿಂದ ಸಾರ್ವಜನಿಕರಿಗೆ ರೋಗಗಳು ಹರಡುವ ಸಂಭವವಿರುವುದರಿಂದ ಆರೋಪಿಗಳ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 105/2024 ಕಲಂ 269, 270 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment