ಬಂಟ್ವಾಳ, ಜೂನ್ 13, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ, ಹಿರಿಯ ಕೈ ಮುಖಂಡ, ಸಜಿಪಮುನ್ನೂರು ಗ್ರಾಮದ ಖಂಡಿಗ ನಿವಾಸಿ ರಾಜಶೇಖರ ನಾಯಕ್ (74) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮಾಜಿ ಸಚಿವ ಬಿ ರಮಾನಾಥ ರೈ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಜಶೇಖರ ನಾಯಕ್ ಪಕ್ಷ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಮೃತರ ಪಾರ್ಥಿವ ಶರೀರ ಗುರುವಾರ (ಜೂನ್ 13) ಮಧ್ಯಾಹ್ನ 2 ಗಂಟೆ ವೇಳೆಗೆ ಖಂಡಿಗ ಮನೆಗೆ ತರಲಾಗುತ್ತಿದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರರಾದ ಶಂಭೂರು ಎಎಂಆರ್ ಕಂಪೆನಿಯ ಇಂಜಿನಿಯರ್ ವಿಘ್ನೇಶ್ ನಾಯಕ್, ಯುವ ಕಾಂಗ್ರೆಸ್ ಮುಖಂಡ ಮಹೇಶ್ ನಾಯಕ್, ಓರ್ವ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
0 comments:
Post a Comment