ಬಂಟ್ವಾಳ, ಜೂನ್ 12, 2024 (ಕರಾವಳಿ ಟೈಮ್ಸ್) : ವಾರದೊಳಗೆ ಕಲ್ಲಡ್ಕ ರಸ್ತೆ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಬುಧವಾರ ಬೆಳಿಗ್ಗೆಯೇ ಕಲ್ಲಡ್ಕಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿಯ ಅವ್ಯವಸ್ಥೆ ಪರಿಶೀಲನೆ ನಡೆಸಿದರು.
ಹೆದ್ದಾರಿ ಚತುಷ್ಪಥ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆ ಎನ್ ಆರ್ ಕಂಪೆನಿ ಅಧಿಕಾರಿಗಳಿಗೆ ಕೆಲವೊಂದು ನಿರ್ದೇಶನ ನೀಡಿದರು. ನಿರ್ಮಾಣ ಹಂತದಲ್ಲಿರುವ ಪಿಲ್ಲರ್ ಗಳ ಸಮೀಪದಲ್ಲಿ ನೀರು ಸರಾಗವಾಗಿ ಹರಿದು ಹೋಗುವುದಕ್ಕಾಗಿ ಒಳ ಭಾಗದಲ್ಲಿ ಚರಂಡಿ ನಿರ್ಮಿಸಲು ಸೂಚಿಸಿದ ಡೀಸಿ ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ 4 ಪಾಯಿಂಟ್‍ಗಳಲ್ಲಿ ಸಮತಟ್ಟಾದ ಕಾಲು ದಾರಿಗಳನ್ನು ಸ್ಥಾಪಿಸುವಂತೆ ಸೂಚಿಸಿದ್ದಾರೆ. ಅಲ್ಲಲ್ಲಿ ರಾಶಿ ಹಾಕಲಾಗಿರುವ ಕಲ್ಲು-ಮಣ್ಣು ದಿಣ್ಣೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಮುಗಿಲನ್ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರ ಸುಗಮವಾಗುವಂತೆ ಸಿಮೆಂಟ್ ಜಲ್ಲಿ ಮಿಶ್ರಣವನ್ನು ಹಾಕುವಂತೆ ಸೂಚಿಸಿದ್ದಾರೆ.
ಈ ಸಂದರ್ಭ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್, ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣಾ ಪಿಎಸ್ಸೈ ಸುತೇಶ್, ಕೆ ಎನ್ ಆರ್ ಕಂಪೆನಿಯ ಎ ಜಿ ಎಂ ರೋಹಿತ್ ರೆಡ್ಡಿ, ಕಂದಾಯ ನಿರೀಕ್ಷಕರಾದ ಜನಾರ್ದನ, ವಿಜಯ್ ಮೊದಲಾದವರು ಜೊತೆಗಿದ್ದರು.
0 comments:
Post a Comment