ಸಸ್ಯ ಹಾಗೂ ಪ್ರಾಣಿ ಸಂತತಿ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಣೆ ಆಗಬೇಕು : ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ - Karavali Times ಸಸ್ಯ ಹಾಗೂ ಪ್ರಾಣಿ ಸಂತತಿ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಣೆ ಆಗಬೇಕು : ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ - Karavali Times

728x90

5 June 2024

ಸಸ್ಯ ಹಾಗೂ ಪ್ರಾಣಿ ಸಂತತಿ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಣೆ ಆಗಬೇಕು : ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್

ಬಂಟ್ವಾಳ, ಜೂನ್ 05, 2024 (ಕರಾವಳಿ ಟೈಮ್ಸ್) : ಜನಸಂಖ್ಯೆ ಹೆಚ್ಚಾದಂತೆಲ್ಲಾ ನೈಸರ್ಗಿಕ ಸಂಪನ್ಮೂಲಗಳ ಬಳಕೆ ಹೆಚ್ಚಾಗುತ್ತದೆ. ಅದರ ಮೇಲೆ ಒತ್ತಡ ಹೆಚ್ಚಾದಾಗ ಸಹಜವಾಗಿಯೇ ಪರಿಸರ ಮಲಿನವಾಗುತ್ತದೆ. ಸಸ್ಯಗಳು ಮತ್ತು ಪ್ರಾಣಿಗಳ ಸಂತತಿ ಅಳಿಯುತ್ತದೆ. ಆದ್ದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಪರಿಸರ ಸಂರಕ್ಷಣೆ ಮಾಡಬೇಕು ಎಂದು ಬಂಟ್ವಾಳ ತಹಶೀಲ್ದಾರ್ ಡಿ ಅರ್ಚನಾ ಭಟ್ ಹೇಳಿದರು. 

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ಕಂದಾಯ ಇಲಾಖಾ ಸಿಬ್ಬಂದಿಗಳಿಗೆ ಸಸಿಗಳನ್ನು ವಿತರಿಸಿ ಅವರು ಮಾತನಾಡಿದರು. 

ಕಂದಾಯ ಇಲಾಖಾ ಸಿಬ್ಬಂದಿಗಳು ಪರಿಸರ ದಿನದ ಆಚರಣೆಯ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಇದೇ ವೇಳೆ ತಹಶೀಲ್ದಾರ್ ನೇತೃತ್ವದಲ್ಲಿ ವಗ್ಗ ಸಮೀಪದ ಆಲಂಪುರಿ ಟೀಪಾರ್ಕ್ ಬಳಿ ವಲಯ ಅರಣ್ಯಾಧಿಕಾರಿ ಪ್ರಫುಲ್ ರೈ ಮತ್ತು ಉಪವಲಯ ಅರಣ್ಯಾಧಿಕಾರಿ ಅನಿಲ್ ಮತ್ತು ಅರಣ್ಯ ಇಲಾಖಾ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಗಿಡಗಳನ್ನು ನೆಡಲಾಯಿತು. 

  • Blogger Comments
  • Facebook Comments

0 comments:

Post a Comment

Item Reviewed: ಸಸ್ಯ ಹಾಗೂ ಪ್ರಾಣಿ ಸಂತತಿ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಣೆ ಆಗಬೇಕು : ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ Rating: 5 Reviewed By: karavali Times
Scroll to Top