ಮಂಗಳೂರು, ಜೂನ್ 26, 2024 (ಕರಾವಳಿ ಟೈಮ್ಸ್) : ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಸಮೀಪದ ಮದನಿ ನಗರಲ್ಲಿ ಮನೆಯ ಮೇಲೆ ಆವರಣ ಗೋಡೆ ಕುಸಿದ ಪರಿಣಾಮ ಮನೆಯಲ್ಲಿ ಮಲಗಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ.
ಮೃತರನ್ನು ಇಲ್ಲಿನ ನಿವಾಸಿ ಯಾಸಿರ್ (45) ಅವರ ಪತ್ನಿ ಮರಿಯಮ್ಮ (40) ಹಾಗೂ ಇಬ್ಬರು ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಹೆಸರಿಸಲಾಗಿದೆ. ಸೋಮವಾರ ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆ ಸಮೀಪದ ನಿವಾಸಿ ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಪರಿಣಾಮ ಮನೆ ಕುಸಿತಕ್ಕೊಳಗಾಗಿ ಮನೆಯಲ್ಲಿ ಮಲಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಲೇ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹ ಹೊರತೆಗೆಯುವ ಕಾರ್ಯಚರಣೆ ಕೈಗೊಂಡಿದ್ದಾರೆ.
0 comments:
Post a Comment