ಬೆಳ್ತಂಗಡಿ, ಜೂನ್ 28, 2024 (ಕರಾವಳಿ ಟೈಮ್ಸ್) : ಖಾಸಗಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಜಯರಾಮ ಹೆಗ್ಡೆ ಎಂದು ಹೆಸರಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಲಾಯಿಲ ಕಡೆಯಿಂದ ಮಂಜೊಟ್ಟಿ ಕಡೆಗೆ ತೆರಳುತ್ತಿದ್ದ ವೇಳೆ ಪುತ್ರಬೈಲು ಎಂಬಲ್ಲಿ ವಿರುದ್ದ ದಿಕ್ಕಿನಿಂದ ಸುದರ್ಶನ್ ಎಂಬವರು ಚಲಾಯಿಸಿಕೊಂಡು ಬಂದ ಖಾಸಗಿ ಬಸ್ಸು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಜಯರಾಮ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಯಿತಾದರೂ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕನ್ಯಾಡಿ ನಿವಾಸಿ ಮನೋಹರ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment