ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್ ಕಳವು : ದೂರು ದಾಖಲು - Karavali Times ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್ ಕಳವು : ದೂರು ದಾಖಲು - Karavali Times

728x90

12 June 2024

ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್ ಕಳವು : ದೂರು ದಾಖಲು

ಬಂಟ್ವಾಳ, ಜೂನ್ 13, 2024 (ಕರಾವಳಿ ಟೈಮ್ಸ್) : ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಘಟನೆ ಮಂಗಳವಾರ ನಡೆದಿದೆ. 

ಅಮ್ಟೂರು ಗ್ರಾಮದ ಕರಿಂಗಾನ ನಿವಾಸಿ ಅಬ್ದುಲ್ ಮನಾಫ್ ಅವರಿಗೆ ಸೇರಿದ ಕೆಎ19 ಇಎಚ್ 9241 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ ಬಜಾಜ್ ಪಲ್ಸರ್ ಬೈಕ್ ಕಳವಾಗಿದೆ. ಇವರು ಜೂನ್ 10 ರಂದು ರಾತ್ರಿ ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದರು. ಜೂನ್ 11 ರಂದು ಬೆಳಿಗ್ಗೆ ಬಂದು ನೋಡುವಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾಗಿರುವ ಬೈಕಿನ ಅಂದಾಜು ಮೌಲ್ಯ 50 ಸಾವಿರ ರೂಪಾಯಿ ಆಗಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್ ಕಳವು : ದೂರು ದಾಖಲು Rating: 5 Reviewed By: karavali Times
Scroll to Top