ಫರಂಗಿಪೇಟೆ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಆಸ್ಪತ್ರೆಗೆ - Karavali Times ಫರಂಗಿಪೇಟೆ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಆಸ್ಪತ್ರೆಗೆ - Karavali Times

728x90

14 June 2024

ಫರಂಗಿಪೇಟೆ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಆಸ್ಪತ್ರೆಗೆ

 ಬಂಟ್ವಾಳ, ಜೂನ್ 14, 2024 (ಕರಾವಳಿ ಟೈಮ್ಸ್) : ರಸ್ತೆ ದಾಟಲು ನಿಂತಿದ್ದ ಪಾದಚಾರಿ ವೃದ್ದೆಗೆ ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪುದು ಗ್ರಾಮದ ಫರಂಗಿಪೇಟೆ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ. 

ಗಾಯಗೊಂಡ ಪಾದಚಾರಿಯನ್ನು ಫರಂಗಿಪೇಟೆ ನಿವಾಸಿ ಲಿಲ್ಲಿ ಮಸ್ಕರೇನಸ್ (81) ಎಂದು ಹೆಸರಿಸಲಾಗಿದೆ. ಇವರು ಗುರುವಾರ ಬೆಳಿಗ್ಗೆ ಫರಂಗಿಪೇಟೆ ಹೆದ್ದಾರಿ ಬದಿ ರಸ್ತೆ ದಾಟಲು ನಿಂತಿದ್ದ ವೇಳೆ ಬಿ ಸಿ ರೋಡು ಕಡೆಯಿಂದ ಬಂದ ಹರಿಕೃಷ್ಣ ಎಂಬವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆ ಬಿದ್ದ ಲಿಲ್ಲಿ ಮಸ್ಕರೇನಸ್ ಅವರು ಗಾಯಗೊಂಡಿದ್ದಾರೆ. ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಫರಂಗಿಪೇಟೆ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಆಸ್ಪತ್ರೆಗೆ Rating: 5 Reviewed By: karavali Times
Scroll to Top