ಬೆಳ್ತಂಗಡಿ, ಜೂನ್ 30, 2024 (ಕರಾವಳಿ ಟೈಮ್ಸ್) : ಚಾಲಕನ ನಿಯಂತ್ರಣ ಮೀರಿ ರಸ್ತೆ ಬದಿಯ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಉಜಿರೆ ಸುಪ್ರೀಂ ಲಾಡ್ಜ್ ಬಳಿ ಶನಿವಾರ ಮುಂಜಾನೆ ವೇಳೆ ಸಂಭವಿಸಿದೆ.
ಮೃತ ಕಾರು ಚಾಲಕನನ್ನು ಪ್ರಜ್ವಲ್ ಎಂದು ಹೆಸರಿಸಲಾಗಿದೆ. ಇವರು ತಮ್ಮ ಕಾರಿನಲ್ಲಿ ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಪ್ರಯಾಣ ಬೆಳೆಸಿದ್ದ ವೇಳೆ ಉಜಿರೆ ಸುಪ್ರೀಂ ಲಾಡ್ಜ್ ಬಳಿ ಕಾರು ಚಾಲಕನ ನಿಯಂತ್ರಣ ಮೀರಿ ರಸ್ತೆಯ ಬಲ ಬದಿಯಲ್ಲಿರುವ ಡಿವೈಡರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಪ್ರಜ್ವಲ್ ಅವರನ್ನು ಉಜಿರೆ ಎಸ್ ಡಿ ಎಂ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರಮೋದ್ ಆರ್ ನಾಯಕ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment