ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಶರೀಫ್ ಭೂಯಾಗೆ ಮಾತೃ ವಿಯೋಗ - Karavali Times ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಶರೀಫ್ ಭೂಯಾಗೆ ಮಾತೃ ವಿಯೋಗ - Karavali Times

728x90

14 June 2024

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಶರೀಫ್ ಭೂಯಾಗೆ ಮಾತೃ ವಿಯೋಗ

ಬಂಟ್ವಾಳ, ಜೂನ್ 14, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಶರೀಫ್ ಭೂಯಾ ಅವರ ತಾಯಿ, ಪಾಣೆಮಂಗಳೂರು ಸಮೀಪದ ಬೋಗೋಡಿ ನಿವಾಸಿ  ಝುಬೈದಾ (60) ಅನಾರೋಗ್ಯದಿಂದ ಶುಕ್ರವಾರ (ಜೂನ್ 14) ಮಧ್ಯಾಹ್ನ ಕೇರಳದಲ್ಲಿನ ತಮ್ಮ ಕಿರಿಯ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೆಲದಿನಗಳ ಹಿಂದೆ ಚಿಕಿತ್ಸೆ ಪ್ರಯುಕ್ತ ಕೇರಳದ ತನ್ನ ಪುತ್ರನ ಮನೆಗೆ ತೆರಳಿದ್ದರು. ಶುಕ್ರವಾರ ಮಧ್ಯಾಹ್ನ ಅನಾರೋಗ್ಯ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಮೃತರ ವಸಿಯ್ಯತ್ ಪ್ರಕಾರ ಪುತ್ರನ ಊರಿನಲ್ಲೇ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಶರೀಫ್ ಭೂಯಾಗೆ ಮಾತೃ ವಿಯೋಗ Rating: 5 Reviewed By: karavali Times
Scroll to Top