ಪಾಣೆಮಂಗಳೂರು : ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬಂಟ್ವಾಳ ನಗರ ಪೊಲೀಸರು - Karavali Times ಪಾಣೆಮಂಗಳೂರು : ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬಂಟ್ವಾಳ ನಗರ ಪೊಲೀಸರು - Karavali Times

728x90

12 June 2024

ಪಾಣೆಮಂಗಳೂರು : ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬಂಟ್ವಾಳ ನಗರ ಪೊಲೀಸರು

ಬಂಟ್ವಾಳ, ಜೂನ್ 13, 2024 (ಕರಾವಳಿ ಟೈಮ್ಸ್) : ಮರಳು ಕಳ್ಳತನ ಮಾಡಿ ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಬಂಟ್ವಾಳ ನಗರ ಪೊಲೀಸರು ಬೇಧಿಸಿದ ಘಟನೆ ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ಬಳಿ ಬುಧವಾರ ನಡೆದಿದೆ. 

ಬುಧವಾರ ಮಧ್ಯಾಹ್ನ ಪಾಣೆಮಂಗಳೂರು ಸಾಗರ್ ಅಡಿಟೋರಿಯಂ ಬಳಿ ಬಿ ಸಿ ರೋಡು ಕಡೆಯಿಂದ ಚಲಾಯಿಸಿಕೊಂಡು ಬರುತ್ತಿದ್ದ ಕೆಎ19 ಎಬಿ3800 ನೋಂದಣಿ ಸಂಖ್ಯೆಯ ಟಿಪ್ಪರ್ ಲಾರಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ನೇತೃತ್ವದ ಪೊಲೀಸರು ತಪಾಸಣೆಗಾಗಿ ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಈ ಅಕ್ರಮ ಮರಳು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. 

ಈ ಬಗ್ಗೆ ಲಾರಿ ಚಾಲಕ ಕಬಕ ನಿವಾಸಿ ಮೊಹಮ್ಮದ್ ಸಫ್ವಾನ್ (24) ಎಂಬಾತನಲ್ಲಿ ವಿಚಾರಿಸಿದಾಗ, ವಳಚ್ಚಿಲ್ ಎಂಬಲ್ಲಿನ ನೇತ್ರಾವತಿ ನದಿಯಿಂದ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೇ ಮರಳು ಕಳ್ಳತನ ನಡೆಸಿ ಸಾಗಿಸುತ್ತಿರುವುದಾಗಿ ತಿಳಿಸಿರುವ ಹಿನ್ನಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಆರೋಪಿ ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು : ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬಂಟ್ವಾಳ ನಗರ ಪೊಲೀಸರು Rating: 5 Reviewed By: karavali Times
Scroll to Top