ಬಂಟ್ವಾಳ, ಜುಲೈ 01, 2024 (ಕರಾವಳಿ ಟೈಮ್ಸ್) : ಪಂಜಿಕಲ್ಲು ಆಚಾರಿಪಲ್ಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇಟ್ಟಿರುವ ಇಂಗ್ಲಿಷ್ ಮಾಧ್ಯಮದ ಬೇಡಿಕೆಯನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಹೇಳಿದರು.
13.90 ಲಕ್ಷ ರೂಪಾಯಿ ಅನುದಾನದಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ಮಂಜೂರಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಚಾರಿಪಲ್ಕೆ, ಪಂಜಿಕಲ್ಲು ಇದರ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ಅತೀ ಹೆಚ್ಚು ಅನುದಾನಗಳನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ನೀಡಲಾಗಿದೆ ಎಂದರು.
ಗ್ರಾಮೀಣ ಭಾಗದ ಪ್ರತಿಯೊಂದು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿರುವ ಶಾಲೆಗಳಿಗೆ ಸರಕಾರದಿಂದ ಸಿಗುವ ಅನುದಾನವನ್ನು ಆದ್ಯತೆ ನೆಲೆಯಲ್ಲಿ ಒದಗಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ, ಪಂಜಿಕಲ್ಲು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರಸಾದ್, ಪಂಚಾಯತ್ ಸದಸ್ಯರುಗಳಾದ ಸಂಜೀವ ಪೂಜಾರಿ ಪಿಲಿಂಗಾಲ್, ಲಕ್ಷ್ಮಿ ನಾರಾಯಣ ಗೌಡ, ಜಯಶ್ರೀ ಪಟ್ರಾಡಿ, ಮಾಜಿ ಸದಸ್ಯರಾದ ಕೃಷ್ಣರಾಜ್ ಜೈನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸುಪ್ರೀತಾ, ಉಪಾಧ್ಯಕ್ಷ ಮೋನಪ್ಪ ಗೌಡ ಭಾಗವಹಿಸಿದ್ದರು. ಮರ್ಸಿನ್ ಮೆಥಿ ಪಾಯಸ್ ಸ್ವಾಗತಿಸಿ, ಜಯಶ್ರೀ ವಂದಿಸಿದರು. ಲಿಖಿತ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment