ಬಂಟ್ವಾಳ, ಜುಲೈ 04, 2024 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಬೋಗೋಡಿ ನಿವಾಸಿ ಉಮ್ಮರ್ ಫಾರೂಕ್ (66) ಅವರು ದೀರ್ಘ ಅನಾರೋಗ್ಯದಿಂದ ಇದ್ದವರು ಗುರುವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಗಲ್ಫ್ ಉದ್ಯೋಗಿಯಾಗಿದ್ದ ಇವರು ಕಳೆದ ಹಲವು ವರ್ಷಗಳಿಂದ ಅನಾರೋಗ್ಯದಿಂದ ಮನೆಯಲ್ಲೆ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, 3 ಮಂದಿ ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ರಾತ್ರಿ 10 ಗಂಟೆ ವೇಳೆಗೆ ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ದಫನ ಭೂಮಿಯಲ್ಲಿ ಇವರ ದಫನ ಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
0 comments:
Post a Comment