ಬಂಟ್ವಾಳ, ಜುಲೈ 31, 2024 (ಕರಾವಳಿ ಟೈಮ್ಸ್) : ಬಂಟ್ವಾಳದ ವಿವಿಧೆಡೆ ಮಂಗಳವಾರ ತಲೆದೋರಿರುವ ಪ್ರವಾಹದ ಸ್ಥಳಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಂಟ್ವಾಳ ಪುರಸಭಾ ವ್ಯಾಪ್ತಿಯ ನೆರೆ ಪೀಡಿತ ಪ್ರದೇಶಗಳಾದ ಬಂಟ್ವಾಳ-ಕೆಳಗಿನ ಪೇಟೆ, ಬಡ್ಡಕಟ್ಟೆ, ದರ್ಬೆ, ಕಾರಂಬಡೆ ಹಾಗೂ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರಲ್ಲದೆ ಜಿಲ್ಲಾಧಿಕಾರಿ, ತಹಶೀಲ್ದಾರ್, ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಸಂಪರ್ಕಿಸಿ ಜನತೆಯ ಕಷ್ಟಗಳಿಗೆ ತಕ್ಷಣ ಸ್ಪಂದಿಸುವAತೆ ಸೂಚಿಸಿದರು.
0 comments:
Post a Comment