ಬಂಟ್ವಾಳ, ಜುಲೈ 15, 2024 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ನಿವಾಸಿ ಶರೀಫ್ ಅವರ ಪತ್ನಿ ಶ್ರೀಮತಿ ಹಲೀಮಾ ಯಾನೆ ಅಮ್ಮಿ (55) ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ಭಾನುವಾರ ತಡ ರಾತ್ರಿ ವೇಳೆ ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಕಾಣಿಸಿಕೊಂಡ ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆ ನಿಮಿತ್ತ ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯದ ಎರಡು ಬ್ಲಾಕ್ ಗಳಿಗೆ ಸಂಬಂಧಿಸಿದಂತೆ ವೈದ್ಯರ ಸಲಹೆ ಮೇರೆಗೆ ಎರಡು ಶಸ್ತ್ರ ಚಿಕಿತ್ಸೆಗಳನ್ನು ನಡೆಸಲಾಗಿದ್ದು ಅದು ಯಶಸ್ವಿಯೂ ಆಗಿತ್ತು. ಆದರೆ ಭಾನುವಾರ ರಾತ್ರಿ ಉಂಟಾದ ಹಠಾತ್ ಹೃದಯಸ್ಥಂಭನದಿಂದ ಚಿಕಿತ್ಸೆಗೆ ಸ್ಪಂದಿಸದ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತಿ, ಮೂವರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ದಫನ ಕಾರ್ಯವು ಸೋಮವಾರ ಮಧ್ಯಾಹ್ನದ ವೇಳೆ ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
0 comments:
Post a Comment