ಕೋಲ್ಪೆ : ಪಿಕಪ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ದಾರುಣ ಮೃತ್ಯು - Karavali Times ಕೋಲ್ಪೆ : ಪಿಕಪ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ದಾರುಣ ಮೃತ್ಯು - Karavali Times

728x90

13 July 2024

ಕೋಲ್ಪೆ : ಪಿಕಪ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ದಾರುಣ ಮೃತ್ಯು

ಕಡಬ, ಜುಲೈ 13, 2024 (ಕರಾವಳಿ ಟೈಮ್ಸ್) : ಪಿಕಪ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಬಳಿ ಶುಕ್ರವಾರ ಮದ್ಯಾಹ್ನ ವೇಳೆ ಸಂಭವಿಸಿದೆ. 

ಮೃತ ಬೈಕ್ ಸವಾರನನ್ನು ಪ್ರಣಾಮ್ ಕೋಟ್ಯಾನ್ (23) ಎಂದು ಹೆಸರಿಸಲಾಗಿದೆ. ಕಡಬ ನಿವಾಸಿ ಅಬ್ದುಲ್ ಜಲೀಲ್ ಅವರು ಚಲಾಯಿಸುತ್ತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಪ್ರಣಾಮ್ ಅವರನ್ನು ತಕ್ಷಣ ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬೈಕ್ ಸವಾರನ ನಿರ್ಲಕ್ಷ್ಯದ ಚಾಲನೆಯೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕೋಲ್ಪೆ : ಪಿಕಪ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ದಾರುಣ ಮೃತ್ಯು Rating: 5 Reviewed By: karavali Times
Scroll to Top