ಬಂಟ್ವಾಳ, ಜುಲೈ 22, 2024 (ಕರಾವಳಿ ಟೈಮ್ಸ್) : ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಯೋಗದೊಂದಿಗೆ ಕುಲಾಲ ಕುಟುಂಬಗಳ ಸಮ್ಮಿಲನ, ಆಟಿ ತಿಂಗಳ ಆಹಾರ ಮತ್ತು ವಿವಿಧ ವಿನೋದಾವಳಿ ಕಾರ್ಯಕ್ರಮವು ಜುಲೈ 28 ರಂದು ಭಾನುವಾರ ಅಪರಾಹ್ನ 3 ಗಂಟೆಗೆ ಪೆÇಸಳ್ಳಿ ಕುಲಾಲ ಭವನದಲ್ಲಿ ನಡೆಯಲಿದೆ.
ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ, ಕೋಶಾಧಿಕಾರಿ ಸೋಮನಾಥ ಸಾಲ್ಯಾನ್ ಭಾಗವಹಿಸಲಿದ್ದಾರೆ. ನಮ್ಮ ತುಳುನಾಡು ಮತ್ತು ಆಟಿ ತಿಂಗಳ ಮಹತ್ವದ ಬಗ್ಗೆ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಪ್ರಧಾನ ಕಾರ್ಯದರ್ಶಿ ನಾರಾಯಣ ಸಿ ಪೆರ್ನೆ ಉಪನ್ಯಾಸಗೈಯುವರು.
ಇದೇ ವೇಳೆ ಎಲ್ಲಾ ವಯೋಮಾನದವರಿಗೆ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದೆ ಮತ್ತು ಮನೆಗಳಲ್ಲಿ ತಯಾರಿಸಿದ ಆಹಾರ ಖಾದ್ಯಗಳ ಪ್ರದರ್ಶನ ನಡೆಯಲಿದೆ ಎಂದು ಸೇವಾದಳದ ದಳಪತಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಮತ್ತು ಮಹಿಳಾ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment