ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾಗುವ ಸ್ಥಾನಕ್ಕೆ ಶೀಘ್ರ ಚುನಾವಣೆ : ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಪಕ್ಷದ ನಾಯಕರಿಗೆ ಉಸ್ತುವಾರಿ ಸಚಿವರ ಕರೆ - Karavali Times ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾಗುವ ಸ್ಥಾನಕ್ಕೆ ಶೀಘ್ರ ಚುನಾವಣೆ : ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಪಕ್ಷದ ನಾಯಕರಿಗೆ ಉಸ್ತುವಾರಿ ಸಚಿವರ ಕರೆ - Karavali Times

728x90

5 July 2024

ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾಗುವ ಸ್ಥಾನಕ್ಕೆ ಶೀಘ್ರ ಚುನಾವಣೆ : ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಪಕ್ಷದ ನಾಯಕರಿಗೆ ಉಸ್ತುವಾರಿ ಸಚಿವರ ಕರೆ

ಮಂಗಳೂರು, ಜುಲೈ 05, 2024 (ಕರಾವಳಿ ಟೈಮ್ಸ್) : ಉಡುಪಿ ಸಂಸದರಾಗಿ ಚುನಾಯಿತರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯ ನಾಯಕರುಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪಕ್ಷದ ವರಿಷ್ಠರಿಗೆ ಕರೆ ನೀಡಿದರು. 

ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸದ್ಯದಲ್ಲೇ ಅಭ್ಯರ್ಥಿಯ ಆಯ್ಕೆ ಕುರಿತು ಸಮಿತಿ ಸದಸ್ಯರು ಸೇರಿ ಮಹತ್ವದ ಸಭೆ ನಡೆಸುತ್ತೇವೆ. ನಾಯಕರ ಮತ್ತು ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸುತ್ತೇವೆ. ಈ ಬಗ್ಗೆ ಯೋಚಿಸಿ ಮುಂದಡಿಯಿಡುತ್ತೇವೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶತಪ್ರಯತ್ನ ಮಾಡುತ್ತೇವೆ ಎಂದರು.

ಸಭೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ವಿಧಾನಸಭಾ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ. ಗಫೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್. ಮಹಮ್ಮದ್, ಜಿ.ಎ. ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ರಾಜ್ಯ ಗೇರು ಅಭಿವೃದ್ದಿ ನಿಗಮದ ಅದ್ಯಕ್ಷೆ ಮಮತಾ ಡಿ ಎಸ್ ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಪಕ್ಷ ಪ್ರಮುಖರಾದ ಯು.ಕೆ. ಮೋನು, ಸುರೇಶ್ ಬಳ್ಳಾಲ್, ಶಶಿಧರ್ ಹೆಗ್ಡೆ ಸಹಿತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಸಂಯೋಜಕರು ಭಾಗವಹಿಸಿದ್ದರು. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸ್ವಾಗತಿಸಿ, ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾಗುವ ಸ್ಥಾನಕ್ಕೆ ಶೀಘ್ರ ಚುನಾವಣೆ : ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಪಕ್ಷದ ನಾಯಕರಿಗೆ ಉಸ್ತುವಾರಿ ಸಚಿವರ ಕರೆ Rating: 5 Reviewed By: karavali Times
Scroll to Top