ಬೆಂಗಳೂರು, ಜುಲೈ 08, 2024 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ವಿಭಾಗದ ಸಿಇಟಿ/ ನೀಟ್ ವಿದ್ಯಾರ್ಥಿಗಳ 2024-25ನೇ ಸಾಲಿನ ಹೊಸ (ಫ್ರೆಶ್) ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಜುಲೈ 20ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳು 2024-25ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ ನೀಟ್ ಮೂಲಕ ವೃತ್ತಿಪರ ಕೋರ್ಸ್ ಗಳಿಗೆ ಆಯ್ಕೆಯಾಗುವವರಿಗೆ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ನಿಗಮದ ವೆಬ್ ಸೈಟ್ ಮೂಲಕ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಜುಲೈ 7 ಇದ್ದುದನ್ನು ಇದೀಗ ವಿದ್ಯಾರ್ಥಿಗಳ ಮನವಿಯ ಹಿನ್ನಲೆಯಲ್ಲಿ ಜುಲೈ 20 ರವೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ.
0 comments:
Post a Comment