ಬಂಟ್ವಾಳ, ಜುಲೈ 22, 2024 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ಅಮ್ಟಾಡಿ ಗ್ರಾಮದ ನಲ್ಕೆಮಾರ್ ಎಂಬಲ್ಲಿ ನಡೆದಿದೆ.
ಗಾಯಗೊಂಡ ಸ್ಕೂಟರ್ ಸವಾರರನ್ನು ಮಧುಸೂಧನ್, ಪ್ರಕಾಶ್ ಹಾಗೂ ಉಮೇಶ್ ಎಂದು ಹೆಸರಿಸಲಾಗಿದೆ. ಪ್ರಕಾಶ್ ಅವರು ಉಮೇಶ್ ಅವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿದ್ದ ಸ್ಕೂಟರ್ ಮಧುಸೂಧನ್ ಅವರು ಸಂಚರಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಗಂಭೀರ ಗಾಯಗೊಂಡ ಮಧುಸೂಧನ್ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಪ್ರಕಾಶ್ ಹಾಗೂ ಸಹಸವಾರ ಉಮೇಶ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment