ಬಂಟ್ವಾಳ, ಜುಲೈ 31, 2024 (ಕರಾವಳಿ ಟೈಮ್ಸ್) : ಮಳೆ ಹಾಗೂ ನೆರ ಬಾಧಿತ ಬಂಟ್ವಾಳದ ಕೆಲವು ಪ್ರಮುಖ ಸ್ಥಳಗಳಿಗೆ ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್ ಆಶೋಕ್ ಅವರು ಬುಧವಾರ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಬಂಟ್ವಾಳ ಬಡ್ಡಕಟ್ಟೆ, ನಾವೂರ ಹಾಗೂ ಜಕ್ರಿಬೆಟ್ಟು ಡ್ಯಾಂಗೆ ಇದೇ ವೇಳೆ ಅವರು ಭೇಟಿ ನೀಡಿದರು.
ಈ ಸಂದರ್ಭ ಸಂತ್ರಸ್ತ ಕುಟುಂಬಗಳ ಜೊತೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು. ನದಿ ತೀರದ ಮುಳುಗಡೆ ಪ್ರದೇಶಗಳಿಗೆ ಹೋಗಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಸ್ಥಳೀಯ ಶಾಸಕ ಯು ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮೊದಲಾದವರು ಜೊತೆಗಿದ್ದರು.
0 comments:
Post a Comment