ಪುತ್ತೂರು, ಜುಲೈ 24, 2024 (ಕರಾವಳಿ ಟೈಮ್ಸ್) : ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಕಬಕ ಗ್ರಾಮದ ಮಂಜಲ್ಪಡ್ಪು ಮಂಗಳ ಸ್ಟೋರ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಮೃತ ಸ್ಕೂಟರ್ ಸವಾರನನ್ನು ಶಿವರಾಮ್ ನಾಯ್ಕ ಎಂದು ಹೆಸರಿಸಲಾಗಿದೆ. ಸಂತೋಷ್ ಕುಮಾರ್ ಎಂಬವರು ಚಲಾಯಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೃತದ ಸಹೋದರ ನಾರಾಯಣ ನಾಯ್ಕ ಅವರು ನೀಡಿದ ದೂರಿನಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment