ಬಂಟ್ವಾಳ, ಜುಲೈ 01, 2024 (ಕರಾವಳಿ ಟೈಮ್ಸ್) : ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐ ಓ ಪಾಣೆಮಂಗಳೂರು ಶಾಖೆಯ ವತಿಯಿಂದ ಬಿ ಸಿ ರೋಡಿನ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನÀಡೆಸಲಾಯಿತು.
ಈ ಸಂದರ್ಭ ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಈ ಅವ್ಯವಹಾರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಪಾತ್ರದ ಕುರಿತು ತನಿಖೆ ನಡೆಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾನೂನು ವಿದ್ಯಾರ್ಥಿ ನಿಹಾಲ್ ಕುದ್ರೋಳಿ, ಎಸ್ ಐ ಒ ಜಿಲ್ಲಾ ಕಾರ್ಯದರ್ಶಿ ಸಲ್ವಾನ್ ಬೋಳಂಗಡಿ, ಪಾಣೆಮಂಗಳೂರು ಶಾಖಾಧ್ಯಕ್ಷ ಮುತಹ್ಹರ್ ಸಾಬ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
0 comments:
Post a Comment