ಬೆಂಗಳೂರು, ಜುಲೈ 11, 2024 (ಕರಾವಳಿ ಟೈಮ್ಸ್) : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಇದರ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 18 ಕೊನೆ ದಿನಾಂಕವಾಗಿದ್ದು, ಶುಲ್ಕ ಪಾವತಿಸಲು ಜುಲೈ 19 ಕೊನೆಯ ದಿನವಾಗಿದೆ. ಸ್ಕ್ಯಾನ್ ಪ್ರತಿ, ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಮಂಡಳಿ ಜಾಲತಾಣದ ಮೂಲಕವೇ ಅರ್ಜಿ ಸಲ್ಲಿಸಬೇಕು.
ಎಸ್ಸೆಸ್ಸೆಲ್ಸಿ ಪರೀಕ್ಷೆ 1 ಮತ್ತು 2ರಲ್ಲಿ ಅನುತ್ತೀರ್ಣಗೊಂಡಿರುವ ಹಾಗೂ ಫಲಿತಾಂಶ ಸುಧಾರಣೆ ಬಯಸುವ ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ನೋಂದಣಿ ಮಾಡಿಕೊಳ್ಳಲು ಜುಲೈ 17 ಕೊನೆಯ ದಿನವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-3 ರ ವೇಳಾಪಟ್ಟಿ ಕೂಡಾ ಮಂಡಳಿಯ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಆಗಸ್ಟ್ 2 ರಿಂದ 9ರವರೆಗೆ ಪರೀಕ್ಷೆಗಳು ನಡೆಯಲಿದೆ.
0 comments:
Post a Comment