ಬಂಟ್ವಾಳ, ಜುಲೈ 12, 2024 (ಕರಾವಳಿ ಟೈಮ್ಸ್) : ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಭಾರತ ಸಂವಿಧಾನದ ಕಲಂ 21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ಈ ಹಿನ್ನಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು 2024-25ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರಾಗಲು ಮತ್ತು ಶಾಲಾ ಮುಖ್ಯವಾಹಿನಿಗೆ ತರಲು ಮನೆ-ಮನೆ ಸಮೀಕ್ಷೆ ಕೈಗೊಳ್ಳಲು ಸೂಚಿಸಿರುವುದರಿಂದ ಪುರಸಭೆಯ ವತಿಯಿಂದ ನೇಮಿಸಲಾದ ಸಮೀಕ್ಷೆದಾರರು ಮನೆ-ಮನೆ ಸಮೀಕ್ಷೆಗೆ ತಮ್ಮ ಮನೆಗಳಿಗೆ ಭೇಟಿ ನೀಡಿದಾಗ ನಿಮ್ಮ ಮನೆಯಲ್ಲಿರುವ 6 ರಿಂದ 18 ವರ್ಷದ ಮಕ್ಕಳ ಪಾಸ್ ಪೋರ್ಟ್ ಸೈಝ್ ಫೋಟೋ, ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡಿನೊಂದಿಗೆ ಮಾಹಿತಿ ನೀಡಿ ಸಹಕರಿಸುವಂತೆ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
12 July 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment