ತಲಪಾಡಿ : ಕಾರು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ವ್ಯಕ್ತಿಗೆ ಗಾಯ - Karavali Times ತಲಪಾಡಿ : ಕಾರು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ವ್ಯಕ್ತಿಗೆ ಗಾಯ - Karavali Times

728x90

9 July 2024

ತಲಪಾಡಿ : ಕಾರು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ವ್ಯಕ್ತಿಗೆ ಗಾಯ

ಬಂಟ್ವಾಳ, ಜುಲೈ 09, 2024 (ಕರಾವಳಿ ಟೈಮ್ಸ್) : ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ರಸ್ತೆ ದಾಟಲು ನಿಂತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಭಾನುವಾರ ಮದ್ಯಾಹ್ನ ವೇಳೆ ಸಂಭವಿಸಿದೆ. 

ಗಾಯಗೊಂಡ ಪಾದಚಾರಿಯನ್ನು ಉತ್ತರ ಪ್ರದೇಶ ರಾಜ್ಯದ ಬರುನ ಬಲ್ಲಿಯಾ ನಿವಾಸಿ ಹಿರಲಾಲ್ ಬಿಂದ (42) ಎಂದು ಹೆಸರಿಸಲಾಗಿದೆ. ಇವರು ಭಾನುವಾರ ಮಧ್ಯಾಹ್ನ ತಲಪಾಡಿಯಲ್ಲಿ ಹೆದ್ದಾರಿ ದಾಟಲು ರಸ್ತೆ ಬದಿ ನಿಂತಿದ್ದ ವೇಳೆ ಬಿ ಸಿ ರೋಡು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎ 21 ಎನ್ 4313 ನೋಂದಣಿ ಸಂಖ್ಯೆಯ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಅಪಘಾತದಿಂದ ಹಿರಲಾಲ್ ಅವರಿಗೆ ಗಾಯವಾಗಿದ್ದು, ಅವರನ್ನು ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ತಲಪಾಡಿ : ಕಾರು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ವ್ಯಕ್ತಿಗೆ ಗಾಯ Rating: 5 Reviewed By: karavali Times
Scroll to Top