ಬಂಟ್ವಾಳ, ಜುಲೈ 26, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಅಟೋ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲ ಕಸಬಾ ಗ್ರಾಮದ ಉಕ್ಕುಡ-ದರ್ಬೆ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಮೃತ ಅಟೋ ರಿಕ್ಷಾ ಚಾಲಕನನ್ನು ಅಬ್ಬಾಸ್ ಎಂದು ಹೆಸರಿಸಲಾಗಿದೆ. ಅಬ್ಬಾಸ್ ಅವರು ಅಟೋ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಕಲ್ಲಡ್ಕ-ಸಾರಡ್ಕ ರಾಜ್ಯ ಹೆದ್ದಾರಿಯಲ್ಲಿ ವಿಟ್ಲ ಕಡೆಯಿಂದ ಕುದ್ದುಪದವು ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆಸೆಯಲ್ಪಟ್ಟ ರಿಕ್ಷಾ ಚಾಲಕ ಅಬ್ಬಾಸ್ ಅವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment