ಬಂಟ್ವಾಳ, ಆಗಸ್ಟ್ 20, 2024 (ಕರಾವಳಿ ಟೈಮ್ಸ್) : ಬಿ ಸಿ ರೋಡಿನ ಹಳೆ ತಾಲೂಕು ಕಚೇರಿ ಬಳಿ ನಿಲ್ಲಿಸಿದ್ದ ಬೈಕ್ ಕಳವುಗೈದಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.
ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿ ಮೋಹನ್ ಅವರಿಗೆ ಸೇರಿದ ಬೈಕ್ ಕಳವಾಗಿದೆ. ಇವರು ಸೋಮವಾರ (ಆಗಸ್ಟ್ 19) ಸಂಜೆಯ ವೇಳೆ, ಬಂಟ್ವಾಳ ಹಳೆ ತಾಲೂಕು ಕಛೇರಿ ಬಳಿ ತನ್ನ KA19ET7355 ನೋಂದಣಿ ಸಂಖ್ಯೆಯ ಪಲ್ಸರ್ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಹೋಗಿದ್ದರು. ಅದೇ ದಿನ ರಾತ್ರಿ ಸದ್ರಿ ಸ್ಥಳಕ್ಕೆ ಬಂದು ನೋಡಿದಾಗ ಮೋಟಾರು ಸೈಕಲ್ ಕಾಣದಿದ್ದು, ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಕಳವಾದ ಮೋಟಾರು ಸೈಕಲ್ ನ ಮೌಲ್ಯ 40 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment