ಬಂಟ್ವಾಳ, ಆಗಸ್ಟ್ 17, 2024 (ಕರಾವಳಿ ಟೈಮ್ಸ್) : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಹೆದ್ದಾರಿಯಲ್ಲೇ ಉರುಳಿ ಬಿದ್ದ ಪರಿಣಾಮ ಕೆಲ ಪ್ರಯಾಣಿಕರು ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಸಮೀಪದ 10ನೇ ಮೈಲಿಕಲ್ಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಕೆಎ51 ಎಡಿ7116 ನೋಂದಣಿ ಸಂಖ್ಯೆಯ ರಮೀಝ್ ಎಂಬವರು ಚಲಾಯಿಸುತ್ತಿದ್ದ ಗ್ಲೈಡ್ ಟೂರಿಸ್ಟ್ ಎಂಬ ಖಾಸಗಿ ಬಸ್ಸು ಗುರುವಾರ ರಾತ್ರಿ ಬೆಂಗಳೂರಿನಿಂದ ಹೊರಟು ಮಂಗಳೂರಿಗೆ ಬರುತ್ತಿದ್ದ ವೇಳೆ ಶುಕ್ರವಾರ ಬೆಳಿಗ್ಗೆ ಮಾರಿಪಳ್ಳ-10ನೇ ಮೈಲಿಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ಮೀರಿ ಹೆದ್ದಾರಿಯಲ್ಲೇ ಉರುಳಿ ಬಿದ್ದಿದೆ.
ಘಟನೆಯಿಂದ ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಬಗ್ಗೆ ಗಾಯಾಳು, ಉಳ್ಳಾಲ-ಒಂಭತ್ತುಕೆರೆ ನಿವಾಸಿ ಕು ರಮ್ಲಾನ್ ಖತೀಜಾ ಸುಲ್ತಾನ್ (22) ಎಂಬವರು ನೀಡಿರುವ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment