ಪುತ್ತೂರು, ಆಗಸ್ಟ್ 20, 2024 (ಕರಾವಳಿ ಟೈಮ್ಸ್) : ಪ್ರೀತಿ ನಿರಾಕರಿಸಿದ ಕಾರಣಕ್ಕೆ ಪರಿಚಯದ ವಿದ್ಯಾರ್ಥಿನಿಗೆ ವಿದ್ಯಾರ್ಥಿಯೇ ಆಯುಧದಿಂದ ತಿವಿದು ಗಾಯಗೊಳಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಪುತ್ತೂರಿನಲ್ಲಿ ನಡೆದಿದೆ.
ಮಂಗಳವಾರ ಬೆಳಿಗ್ಗೆ ಸಂತ್ರಸ್ತ ಬಾಲಕಿ ತಾನು ವ್ಯಾಸಂಗ ಮಾಡುತ್ತಿರುವ ಪುತ್ತೂರಿನ ಕಾಲೇಜಿಗೆ ತೆರಳುತ್ತಿದ್ದಾಗ, ಬಾಲಕಿಯ ಹಿಂದುಗಡೆಯಿಂದ ಆಕೆಯ ಪರಿಚಯದ ಆರೋಪಿ ಬಾಲಕ ಹಿಂಬಾಲಿಸಿಕೊಂಡು ಬಂದು, ಬಾಲಕಿಯನ್ನು ಪ್ರೀತಿಸುತ್ತಿರುವ ವಿಚಾರದಲ್ಲಿ ಮಾತನಾಡಿರುತ್ತಾನೆ. ಈ ವೇಳೆ ಬಾಲಕಿ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಬಾಲಕ ಆತನ ಬಳಿಯಿದ್ದ ಯಾವುದೋ ಹರಿತವಾದ ಆಯುಧದಿಂದ ಸಂತ್ರಸ್ಥೆಯ ಕೈಗೆ ತಿವಿದು ಪರಾರಿಯಾಗಿರುತ್ತಾನೆ. ಗಾಯಗೊಂಡ ಬಾಲಕಿ ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ. ಈ ಬಗ್ಗೆ ಬಾಲಕಿ ನೀಡಿದ ದೂರಿನಂತೆ ದ ಕ ಮಹಿಳಾ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 42/2024 ಕಲಂ 78, 126(2), 118(1), 238 ಬಿ ಎನ್ ಎಸ್ 2023 ಮತ್ತು ಕಲಂ 12 ಪೆÇೀಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment