ಬಂಟ್ವಾಳ, ಆಗಸ್ಟ್ 30, 2024 (ಕರಾವಳಿ ಟೈಮ್ಸ್) : ಬಂಟ್ವಾಳ ಪೊಲೀಸ್ ಉಪವಿಭಾಗ, ರೋಟರಿ ಕ್ಲಬ್ ಮೊಡಂಕಾಪು, ನಮ್ಮ ನಾಡ ಒಕ್ಕೂಟ (ರಿ) ಬಂಟ್ವಾಳ ಘಟಕ ಮತ್ತು ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜು ಇವುಗಳ ಸಹಯೋಗದೊಂದಿಗೆ “ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಹಾಗೂ ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ” ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮದಲ್ಲಿ ಬಂಟ್ವಾಳ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್ ಅವರು ಸೈಬರ್ ಅಪರಾಧಗಳು, ಮಾದಕ ದ್ರವ್ಯದ ಪರಿಣಾಮಗಳು, ಪೊಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಸಂಸ್ಥೆಯ ಉಪನ್ಯಾಸಕರು ಭಾಗವಹಿಸಿದ್ದರು.
0 comments:
Post a Comment