ಬಂಟ್ವಾಳ, ಆಗಸ್ಟ್ 02, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ನೆರೆ ಪೀಡಿತ ಪ್ರದೇಶಗಳಾದ ಅಮ್ಮುಂಜೆ, ಗೂಡಿನಬಳಿ ಆಲಡ್ಕ, ಕೆಳಗಿನಪೇಟೆ, ನಾವೂರ, ಅನೇಜ ತಿರುವು, ಅಜಿಲಮೊಗರುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾಜಿ ಸಚಿವ ಬಿ ರಮಾನಾಥ ರೈ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಸಹಿತ ವಿವಿಧ ಇಲಾಖಾಧಿಕಾರಿಗಳು ಜೊತೆಗಿದ್ದರು.
0 comments:
Post a Comment