ಬೆಳ್ತಂಗಡಿ, ಆಗಸ್ಟ್ 14, 2024 (ಕರಾವಳಿ ಟೈಮ್ಸ್) : ಪಿಕಪ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನನ್ನು ಉಮೇಶ್ ಎಂದು ಹೆಸರಿಸಲಾಗಿದೆ. ಉಮೇಶ್ ಅವರು ಮಲೆಬೆಟ್ಟು ಕಡೆಯಿಂದ ಉಜಿರೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಉಜಿರೆ ಕಡೆಯಿಂದ ಸತೀಶ್ ಗೌಡ ಅವರು ಚಲಾಯಿಸಿಕೊಂಡು ಬಂದ ಪಿಕಪ್ ವಾಹನ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಉಜಿರೆ ಎಸ್ ಡಿ ಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಶ್ರೀಧರ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment