ಬಂಟ್ವಾಳ, ಆಗಸ್ಟ್ 07, 2024 (ಕರಾವಳಿ ಟೈಮ್ಸ್) : ಸ್ಕೂಟರ್ ಡಿಕ್ಕಿ ಹೊಡೆದು ಹೆದ್ದಾರಿ ದಾಟಲು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ 10ನೇ ಮೈಲಿಕಲ್ಲು ಎಂಬಲ್ಲಿ ಸೋಮವಾರ ರಾತ್ರಿ ವೇಳೆ ನಡೆದಿದೆ.
ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಅಮ್ಮೆಮಾರು ನಿವಾಸಿ ಅಹಮ್ಮದ್ ಬಶೀರ್ ಎಂದು ಹೆಸರಿಸಲಾಗಿದೆ. ಇವರು ಮಾರಿಪಳ್ಳ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಹೆದ್ದಾರಿ ದಾಟಲು ರಸ್ತೆ ಬದಿ ನಿಂತಿದ್ದ ವೇಳೆ ಜೋಯಲ್ ಇಮಾನ್ಯುಯೆಲ್ ಎಂಬವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆ ಬಿದ್ದು ಗಾಯಗೊಂಡ ಬಶೀರ್ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತ ನಡೆಸಿದ ಸ್ಕೂಟರ್ ಸವಾರ ಜೋಯಲ್ ಅವರು ಕೂಡಾ ಗಾಯಗೊಂಡಿದ್ದು, ಅರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment