ಬೆಂಗಳೂರು, ಆಗಸ್ಟ್ 29, 2024 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ಇಲಾಖೆಯಿಂದ 2024-25ನೇ ಸಾಲಿನ ಶುಲ್ಕ ಮರುಪಾವತಿ ಯೋಜನೆಯಡಿ ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ 50ಕ್ಕಿಂತ ಹೆಚ್ಚಿನ ಅಂಕ ಪಡೆದ ಪಿಯುಸಿ ಹಾಗೂ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರದ ಎಸ್.ಎಸ್.ಪಿ. ಪೆÇೀರ್ಟಲ್ ಮೂಲಕ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 31 ಕೊನೆ ದಿನಾಂಕವಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಅಲ್ಪಸಂಖ್ಯಾತ ಇಲಾಖಾ ಕಚೇರಿ ಪ್ರಕಟಣೆ ತಿಳಿಸಿದೆ.
29 August 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment