ಮಂಗಳೂರು, ಆಗಸ್ಟ್ 01, 2024 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಮುಂದುವರಿದಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ಆಗಸ್ಟ್ 2 ರ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ವರುಣಾರ್ಭಟ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ನೀಡಿದ್ದಾರೆ. ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯಗೊಳಿಸುವಂತಿಲ್ಲ, ದುರ್ಬಲ ಅಥವಾ ಶಿಥಿಲ ಕಟ್ಟಡಗಳಿದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ-ಪ್ರವಚನಗಳಿಗೆ ಬಳಸುವಂತಿಲ್ಲ, ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ನೀರು ಇರುವ ತಗ್ಗು ಪ್ರದೇಶ, ಮುಳುಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಸಾರ್ವಜಕನಿಕರು, ಪ್ರವಾಸಿಗರು ತೆರಳದಂತೆ ಮುಂಜಾಗ್ರತೆ ವಹಿಸುವುದು, ಮೀನುಗಾರರು ಮೀನುಗಾರಿಕೆ ಸಮುದ್ರಕ್ಕೆ ತೆರಳದೆ ಇರುವುದು, ಪ್ರಾಕೃತಿಕ ವಿಕೋಪದ ಅಪಾಯಗಳು ಸಂಭವಿಸುವ ಬಗ್ಗೆ ಮುನ್ಸೂಚನೆ ಇದ್ದರೆ ಸಾರ್ವಜನಿಕರು ತಕ್ಷಣ ಸ್ಥಳೀಯಾಡಳಿತವನ್ನು ಸಂಪರ್ಕಿಸುವುದು, ಸಾರ್ವಜನಿಕರು ಜಿಲ್ಲಾಡಳಿತದ ಆದೇಶವನ್ನು ಪಾಲಿಸುವ ಮೂಲಕ ಸಂಭಾವ್ಯ ಮಳೆ ಹಾನಿ, ಪ್ರಾಕೃತಿಕ ವಿಕೋಪ ತಡೆಗಟ್ಟಲು ನೆರವಾಗುವಂತೆ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.
ಪ್ರಕೃತಿ ವಿಕೋಪಕ್ಕೆ ಸಂಬAಧಿಸಿದAತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ತುರ್ತು ಸೇವೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ 1077 ಅಥವಾ ದೂರವಾಣಿ ಸಂಖ್ಯೆ 0824-2442590 ಹಾಗೂ ಆಯಾ ತಾಲೂಕುಗಳ ಕಂಟ್ರೋಲ್ ರೂಂ ಸಂಖ್ಯೆ ಗೆ ಸಂಪರ್ಕಿಸುವAತೆ ಜಿಲ್ಲಾಧಿಕಾರಿ ಮುಲ್ಲೆöÊ ಮುಹಿಲನ್ ಸಾರ್ವಜನಿಕರಿಗೆ ತಿಳಿಸಿದ್ದಾರೆ.
0 comments:
Post a Comment