ಬಂಟ್ವಾಳ, ಆಗಸ್ಟ್ 07, 2024 (ಕರಾವಳಿ ಟೈಮ್ಸ್) : ಸ್ಕೂಟರುಗಳ ಮಧ್ಯೆ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಕುಕ್ಕಿಪ್ಪಾಡಿ ಗ್ರಾಮದ ಸಿದ್ದಕಟ್ಟೆ ಬಿ ಎಸ್ ಎನ್ ಎಲ್ ಟವರ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ನಿವಾಸಿ ಜೆಪ್ರಿ ಜೀವನ್ ಬರೆಟ್ಟೊ ಅವರು ತನ್ನ ಸ್ಕೂಟರಿನಲ್ಲಿ ಬರುತ್ತಿದ್ದ ವೇಳೆ ಸಿದ್ದಕಟ್ಟೆ ಎಂಬಲ್ಲಿ ಇನ್ನೊಂದು ಸ್ಕೂಟರ್ ಚಾಲಕ ಇಬ್ಬರು ಸಹಸವಾರರನ್ನು ಕುಳ್ಳಿರಿಸಿಕೊಂಡು ನಿರ್ಲಕ್ಷ್ಯದ ಚಾಲನೆ ಮಾಡಿ ಬಂದು ಜೀವನ್ ಅವರ ಸ್ಕೂಟರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಎರಡೂ ಸ್ಕೂಟರ್ ಗಳು ರಸ್ತೆಗೆ ಬಿದ್ದು ಸವಾರರು ಗಾಯಗೊಂಡಿದ್ದಾರೆ. ಈ ಪೈಕಿ ಜೀವನ್ ಅವರು ಸಿದ್ದಕಟ್ಟೆ ಖಾಸಗಿ ಕ್ಲಿನಿಕಿನಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೊಂದು ಸ್ಕೂಟರ್ ಸವಾರ ಹಾಗೂ ಸಹಸವಾರರು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment