ಬೆಳ್ತಂಗಡಿ, ಆಗಸ್ಟ್ 07, 2024 (ಕರಾವಳಿ ಟೈಮ್ಸ್) : ಅಕ್ರಮ ಕೋಳಿ ಅಂಕ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ 5 ಮಂದಿಯನ್ನು ದಸ್ತಗಿರಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಬಂದಾರು ಗ್ರಾಮದ ಪೇರಲ್ದಪಲ್ಕೆ ಗುಡ್ಡದಲ್ಲಿ ಸೋಮವಾರ ಸಂಜೆ ನಡೆದಿದೆ.
ಬಂಧಿತ ಆರೋಪಿಗಳನ್ನು ದೇವಪ್ಪ, ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ, ಬಾಲಕೃಷ್ಣ ಎಂದು ಹೆಸರಿಸಲಾಗಿದೆ. ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್ಸೈ ಕಿಶೋರ್ ಪಿ ಅವರ ನೇತೃತ್ವದ ಪೊಲೀಸರು ಈ ದಾಳಿ ಸಂಘಟಿಸಿದ್ದಾರೆ.
ದಾಳಿ ವೇಳೆ 5,410/- ರೂಪಾಯಿ ನಗದು ಹಣ, 3 ಹುಂಜ ಕೋಳಿಗಳು, 2 ಕೋಳಿ ಅಂಕಕ್ಕೆ ಬಳಸುವ ಕತ್ತಿಗಳು ಹಾಗೂ ಸ್ಥಳದಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯದ ಅನುಮತಿ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 58/2024 ಕಲಂ 87 ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
0 comments:
Post a Comment