ಬಂಟ್ವಾಳ, ಆಗಸ್ಟ್ 14, 2024 (ಕರಾವಳಿ ಟೈಮ್ಸ್) : ಖಾಸಗಿ ಬಸ್ ಡಿಕ್ಕಿ ಹೊಡೆದು ಆಕ್ಟಿವಾ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಸೇತುವೆ ಬಳಿ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ಮುಹಿಯುದ್ದೀನ್ ಮುಝಮ್ಮಿಲ್ ಎಂದು ಹೆಸರಿಸಲಾಗಿದೆ. ಈತ ಆಗಸ್ಟ್ 12 ರಂದು ತನ್ನ ಆಕ್ಟಿವಾ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ಹರಿಪ್ರಸಾದ್ ಎಂಬವರು ಚಲಾಯಿಸುತ್ತಿದ್ದ ಮಹೇಶ್ ಹೆಸರಿನ ಖಾಸಗಿ ಬಸ್ಸು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಮುಝಮ್ಮಿಲ್ ಅವರು ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಕಟ್ಟತ್ತಿಲ ನಿವಾಸಿ ಕೆ ಬಿ ಉಸ್ಮಾನ್ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment