ಮಂಗಳೂರು, ಆಗಸ್ಟ್ 15, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ, ಅದ್ರಾಮ ಎನ್ (ಅಊಅ 811) ರವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುತ್ತಾರೆ.
ಸದ್ರಿಯವರು 2005ರಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು, ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ 19 ವರ್ಷ ಸೇವೆ ಸಲ್ಲಿಸಿರುತ್ತಾರೆ. ತಮ್ಮ ಸೇವಾವಧಿಯಲ್ಲಿ ಕೋಮುಸೂಕ್ಷ್ಮ ಬಂಟ್ವಾಳ ಸಹಿತ ಜಿಲ್ಲೆಯಲ್ಲಿ ನಡೆದ ಹಲವಾರು ಕೋಮುಗಲಭೆ ಪ್ರಕರಣ, ಕಳ್ಳತನ ಪ್ರಕರಣ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ, ಆರೋಪಿಗಳ ಪತ್ತೆ ಕಾರ್ಯದಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
0 comments:
Post a Comment