ಬಂಟ್ವಾಳ, ಸೆಪ್ಟೆಂಬರ್ 30, 2024 (ಕರಾವಳಿ ಟೈಮ್ಸ್) : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಬಾಳಿಕೆಕೋಡಿ ಪ್ರದೇಶದ ಕೃಷಿಕರ ಮತ್ತು ಗ್ರಾಮಸ್ಥರ 40 ವರ್ಷಗಳ ಬೇಡಿಕೆಯಾದ ಕಿಂಡಿ ಅಣೆಕಟ್ಟು ಮತ್ತು ಸೇತುವೆ ಬೇಡಿಕೆಗೆ ರಾಜ್ಯ ವಿಧಾನಸಭಾಧ್ಯಕ್ಷರೂ, ಕ್ಷೇತ್ರದ ಶಾಸಕರೂ ಆಗಿರುವ ಯು ಟಿ ಖಾದರ್ ಅವರು ಅಸ್ತು ಎಂದಿದ್ದಲ್ಲದೆ ನುಡಿದಂತೆ ನಡೆದಿದ್ದಾರೆ. ಭಾನುವಾರ ಪ್ರದೇಶಕ್ಕೆ ಭೇಟಿ ನೀಡಿದ ಸ್ಪೀಕರ್ ಖಾದರ್ ಅವರು ಇಲ್ಲಿನ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮುಡಿಪು, ಬ್ಲಾಕ್ ಹಿಂದುಳಿದ ವರ್ಗಗಳ ಘಟಕಾಧ್ಯಕ್ಷ ಅನಿಲ್ ಸೂತ್ರಬೈಲ್, ಗ್ರಾಮ ಪಂಚಾಯತ್ ಸದಸ್ಯರಾದ ಯಾಕೂಬ್, ಪ್ರತಾಪ್ ಕರ್ಕೇರ, ವಲಯ ಕಾಂಗ್ರೆಸ್ ಅಧ್ಯಕ್ಷ ಅಶ್ರಫ್ ಸಂಪಿಲ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment