ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ - Karavali Times ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ - Karavali Times

728x90

9 October 2024

ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ

ಮುಂಬೈ, ಅಕ್ಟೋಬರ್ 10, 2024 (ಕರಾವಳಿ ಟೈಮ್ಸ್) : ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ (86) ಅವರು ವಯೋ ಸಹಜ ಅನಾರೋಗ್ಯದಿಂದ ಖ್ಯಾತ ಬುಧವಾರ ವಿಧಿವಶರಾಗಿದ್ದಾರೆ. 

 ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್‌ನ ಚೇರ್ಮನ್‌ ರತನ್‌ ಟಾಟಾ ಅವರನ್ನು ತೀವ್ರ ಅನಾರೋಗ್ಯ ಕಾರಣದಿಂದ ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 

 86ರ ಹರೆಯದ ರತನ್‌ ಟಾಟಾ ಅವರು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಬುಧವಾರ ಸಂಜೆ ಅವರ ಆರೋಗ್ಯ ಗಂಭೀರವಾಗಿದ್ದು ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿತ್ತು. 

 1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್‌ ಆಗಿದ್ದ ರತನ್‌ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್‌ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು. 1996ರಲ್ಲಿ ಟಾಟಾ ಟೆಲಿಸರ್ವೀಸಸ್‌ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು. ಟಾಟಾ ಸನ್ಸ್‌ನಿಂದ ಕೆಳಗಿಳಿದ ಬಳಿಕ ಅವರಿಗೆ ಟಾಟಾ ಸನ್ಸ್, ಟಾಟಾ ಇಂಡಸ್ಟ್ರೀಸ್, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್ ಮತ್ತು ಟಾಟಾ ಕೆಮಿಕಲ್ಸ್‌ನ ಅಧ್ಯಕ್ಷ ಗೌರವ ಪ್ರಶಸ್ತಿಯನ್ನು ನೀಡಲಾಯಿತು ಎಂದು ಕಂಪನಿಯ ವೆಬ್‌ಸೈಟ್ ಹೇಳುತ್ತದೆ.
  • Blogger Comments
  • Facebook Comments

0 comments:

Post a Comment

Item Reviewed: ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ Rating: 5 Reviewed By: lk
Scroll to Top