ಮಂಗಳೂರು, ಅಕ್ಟೋಬರ್ 09, 2024 (ಕರಾವಳಿ ಟೈಮ್ಸ್) : ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಬ್ಲ್ಯಾಕ್ ಮೇಲ್ ಹಾಗೂ ಮಾನಸಿಕ ಕಿರುಕುಳ ಪ್ರಕರಣದಲ್ಲಿ ಮತ್ತೆ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 6ಕ್ಕೇರಿದಂತಾಗಿದೆ.
ಬಂಧಿತ ಆರೋಪಿಗಳನ್ನು ಅಬ್ದುಲ್ ಸತ್ತಾರ್, ಮುಸ್ತಫಾ ಹಾಗೂ ಶಾಫಿ ಎಂದು ಗುರುತಿಸಲಾಗಿದೆ. ಇದಕ್ಕೂ ಮೊದಲು ಪ್ರಕರಣದಲ್ಲಿ ಎ1 ಆರೋಪಿ ರೆಹಮತ್ ಅಲಿಯಾಸ್ ಆಯಿಶಾ, ಆಕೆಯ ಪತಿ ಎ5 ಆರೋಪಿ ಶೋಹೆಬ್ ಹಾಗೂ ಸಿರಾಜ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಇದೀಗ ಬಂಧಿತನಾಗಿರುವ ಅಬ್ದುಲ್ ಸತ್ತಾರ್ ಪ್ರಕರಣದ ಎ2 ಆರೋಪಿಯಾಗಿದ್ದು, ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗಿದೆ. 6 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಆರೋಪಿಗಳ ಗುಂಪು ಮುಮ್ತಾಜ್ ಅಲಿ ಅವರಿಂದ 50 ಲಕ್ಷ ರೂಪಾಯಿ ಪಡೆದುಕೊಂಡಿದ್ದು, ಮತ್ತಷ್ಟು ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ಹೇಳಲಾಗಿದೆ. ಇದೇ ಕಾರಣದಿಂದ ಮಾನಸಿಕವಾಗಿ ಬೇಸತ್ತ ಮುಮ್ತಾಜ್ ಅಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
0 comments:
Post a Comment