ಬಂಟ್ವಾಳ, ಅಕ್ಟೋಬರ್ 10, 2024 (ಕರಾವಳಿ ಟೈಮ್ಸ್) : ಹಾಡಹಗಲೇ ಎರಡು ಮನೆಗಳಿಗೆ ನುಗ್ಗಿದ ಕಳ್ಳರು ನಗದು ಹಾಗೂ ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಅಳಕೆಮಜಲು ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಇಲ್ಲಿನ ನಿವಾಸಿ ಪುಷ್ಪರಾಜ್ (52) ಹಾಗೂ ಅವರ ನೆರೆಮನೆ ನಿವಾಸಿ ಕೃಷ್ಣಪ್ಪ ಕುಲಾಲ್ ಅವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಪುಷ್ಪರಾಜ್ ಅವರು ಬುಧವಾರ ತನ್ನ ಮನೆಗೆ ಬೀಗ ಹಾಕಿ ಹೋಗಿದ್ದ ವೇಳೆ, ಮದ್ಯಾಹ್ನ 1 ಗಂಟೆಯಿಂದ 2.30 ರವ ಮಧ್ಯದ ಅವಧಿಯಲ್ಲಿ ಯಾರೋ ಕಳ್ಳರು ಮನೆಯ ಹಿಂಬಾಗಿಲನ್ನು ಯಾವುದೋ ಸಾಧನದಿಂದ ಮುರಿದು ಒಳಪ್ರವೇಶಿಸಿ ಮನೆಯ ಬೆಡ್ ರೂಮಿನಲ್ಲಿದ್ದ ಸುಮಾರು 3,26,800/- ರೂಪಾಯಿ ಮೌಲ್ಯದ ಒಟ್ಟು 86 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುತ್ತಾರೆ.
ಅದೇ ರೀತಿ ನೆರೆಮನೆ ನಿವಾಸಿ ಕೃಷ್ಣಪ್ಪ ಕುಲಾಲ್ ಅವರ ಮನೆಯ ಹಿಂಬಾಗಿಲನ್ನು ಮುರಿದು 15 ಸಾವಿರ ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿರುತ್ತಾರೆ. ಈ ಎರಡೂ ಕಳ್ಳತನ ಘಟನೆ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment