ಪುತ್ತೂರು, ಅಕ್ಟೋಬರ್ 30, 2024 (ಕರಾವಳಿ ಟೈಮ್ಸ್) : ಗುಡ್ಡ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಜೂಜಾಟ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಒಳಮೊಗ್ರು ಗ್ರಾಮದ ಕುಟಿನೋಪಿನಡ್ಕ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಅ 28 ರಂದು ಸಂಜೆ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ ಕುಟಿನೋಪಿನಡ್ಕ ಎಂಬಲ್ಲಿ ಸಾರ್ವಜನಿಕ ಸರಕಾರಿ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜು ಅಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಪಿಎಸ್ಸೈ ಜಂಬೂರಾಜ್ ಮಹಾಜನ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೆಲವರು ಸ್ಥಳದಿಂದ ಓಡಿ ಹೋಗಿದ್ದು, ಕೃತ್ಯದಲ್ಲಿ ತೊಡಗಿದ್ದ 5 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 7710/- ರೂಪಾಯಿ ನಗದು ಹಣ, 5 ಕೋಳಿಗಳನ್ನು ಮತ್ತು ಕೋಳಿ ಕಾಲಿಗೆ ಕಟ್ಟಲು ಬಳಸಿದ ಬಾಳು ಕತ್ತಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment